
ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಇವರು ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸುತ್ತಿದ್ದು, ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.






















































