
ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಹೆಚ್. ಗೋಪಾಲ್ ಭಂಡಾರಿಯವರ 5ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 4 ರಂದು ಬೆಳಿಗ್ಗೆ 9:30 ರಿಂದ ನಾರಾಯಣ ಗುರು ಸಭಾಭವನ ಬಿಲ್ಲವ ಸಂಘ ಪೆರ್ವಾಜೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರುಗಳು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು ರಕ್ತ ದಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಪ್ರಕಟನೆಯಲ್ಲಿ ತಿಳಿಸಿದೆ.