
2024 25 ನೇ ಸಾಲಿನ ಮಾಳ ಗ್ರಾಮದ ಪ್ರಥಮ ಸಭೆಯು ಶ್ರೀರಾಮ ಮಂದಿರ ಮಾಳ ಇದರ ಸಭಾಭವನದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿ ವಹಿಸಿಕೊಂಡಿದ್ದರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು ಮಾರ್ಗದರ್ಶಕ ಅಧಿಕಾರಿಯಾಗಿ ಮಾಳ ಆರೋಗ್ಯ ಕೇಂದ್ರದ ವೈದ್ಯರಾದ ದಿಶಾ ಇವರು ಭಾಗವಹಿಸಿ ಮಳೆಗಾಲದ ಸಂದರ್ಭದಲ್ಲಿ ಬರುವ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದರು ನಂತರ ಗ್ರಾಮಾಂತರ ಆರಕ್ಷಕ ಠಾಣೆ ಅರಣ್ಯ ಇಲಾಖೆ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇದರ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಬರುವ ಕೆಲವು ವಿಷಯಗಳ ಬಗ್ಗೆ ಸವಿವರವಾಗಿ ತಿಳಿಸಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಶ್ರೀನಿವಾಸ್ ಇವರು 23 24 ನೇ ಸಾಲಿನ ವರದಿ ವಾಚನ ಮತ್ತು ಖರ್ಚು ವೆಚ್ಚಗಳ ಬಗ್ಗೆ ಮಂಡಿಸಿದರು ಈ ಸಂದರ್ಭ ಪಂಚಾಯತ್ ವತಿಯಿಂದ ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವನ್ನು ನೀಡಿದರು ಪಂಚಾಯತ್ ಸದಸ್ಯರಾದ ಅಶೋಕ್ ಸ್ವಾಗತಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು ಈ ಸಭೆಯಲ್ಲಿ ಮಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿದರು