
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾ. 25 ರಿಂದ ಏ. 6ರವರೆಗೆ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಳಿಸಲಿದೆ.
ಬೆಳಗ್ಗೆ 10:30ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದು ಬಳಿಕ ಇಲಾಖೆ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.