
ಕಾರ್ಕಳ: ತಾಲೂಕಿನ ಮಿಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ (37) ಎಂಬವರು ಮುಂಬೈಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದು ಇದೀಗ ಸೋಮವಾರ ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮುಂಬೈಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಶರತ್ ಶೆಟ್ಟಿ ಆಗಾಗ ಊರಿಗೆ ಬಂದು ಹೋಗುತ್ತಿದ್ದರು. ಮೃತರು ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದು ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.