
ಬೆಂಗಳೂರು: ಹಲವು ಸಂಘಟನೆಗಳು, ಕಾಂಗ್ರೆಸ್ ಶಾಸಕರು, ಸಚಿವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದು ಇದೀಗ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಸಹ ಸಿಎಂ ಗೆ ನೈತಿಕ ಬೆಂಬಲ ಸೂಚಿಸಿದೆ.
ಭಾನುವಾರ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟದ ಸ್ವಾಮೀಜಿಗಳು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದ್ದಾರೆ.
- ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು, ಕನಕ ಪೀಠ ಕಾಗಿನೆಲೆ.
- ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ.
- ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಭೋವಿ ಗುರುಪೀಠ ಚಿತ್ರದುರ್ಗ.
- ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಮಾದರ ಚನ್ನಯ ಗುರುಪೀಠ ಚಿತ್ರದುರ್ಗ.
- ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗಿರಥ ಪೀಠ ಮಧುರೆ.
- ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ.
- ಶ್ರೀ ರೇಣುಕಾನಂದ ಸ್ವಾಮಿಗಳು, ನಾರಾಯಣ ಗುರುಪೀಠ ಶಿವಮೊಗ್ಗ.
- ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಮಡಿವಾಳ ಗುರುಪೀಠ ಚಿತ್ರದುರ್ಗ.
- ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ.
- ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು, ಸರೂರು ವಿಜಯನಗರ.
ಈ ಎಲ್ಲಾ ಪೂಜ್ಯರು ನಿಯೋಗದ ಪರವಾಗಿ ಉಪಸ್ಥಿತರಿದ್ದು, ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿ, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿಗಳ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.













