
ಬೆಂಗಳೂರು : ಮಾಜಿ ಸಂಸದ, ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸದಾಶಿವನಗರದ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತು ತಪ್ಪುವವರಲ್ಲ. ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದರೂ ಅದನ್ನು ಈಡೇರಿಸುತ್ತಾರೆ ಎಂದು ಹೇಳಿದ್ದಾರೆ.
ಕರ್ನಾಟಕದ ಜನರ ಆಶೀರ್ವಾದದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು ಸಿದ್ದರಾಮಯ್ಯ ಅವರು ಕರ್ನಾಟಕ ಜನರಿಗೆ ಕೊಟ್ಟ ಎಲ್ಲ ಭರವಸೆಯನ್ನೂ ಈಡೇರಿಸಿದ್ದಾರೆ. ಅವರು ಕೊಟ್ಟ ಮಾತು ತಪ್ಪುವವರಲ್ಲ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ನೀಡಿದ್ದಾರೋ ಅದರಂತೆ ನಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಅಧಿಕಾರ ಹಸ್ತಾಂತರ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ ಮತ್ತು ಚರ್ಚೆ ಮಾಡುವಷ್ಟು ದೊಡ್ಡವನೂ ನಾನಲ್ಲ. ಅವರಿಗೆ ಅವರದ್ದೇ ಆದ ಜವಾಬ್ದಾರಿಯಿದೆ ಎಂದರು.






















































