
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಆಸ್ತಿ. ಅವರು ಏನು ಹೇಳಿದರೂ ಅದಕ್ಕೆ ನಮ್ಮ ತಕರಾರಿಲ್ಲ. ಅದು ನಮಗೆ ವೇದವಾಕ್ಯ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರದ ಬಗ್ಗೆ ನಾನು ಯಾವತ್ತು ಏನೂ ಹೇಳಿಲ್ಲ. ಅವರು ಹೇಳಿದ್ದಕ್ಕೆ ನಾನು ಗೌರವ ನೀಡುತ್ತೇನೆ. ಇನ್ನು, ಮಾಧ್ಯಮಗಳು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದೂ ಏನಾದರೂ ಇದ್ದರೆ ನನ್ನ ಮತ್ತು ಪಕ್ಷದ ಹೈಕಮಾಂಡ್ ನಡುವೆ ಇರುತ್ತದೆ. ಅದನ್ನು ಮಾತನಾಡಿ ಸರಿಪಡಿಸಿಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.



















