
ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವೇಕ ಯೋಜನೆಯಲ್ಲಿ ನಿರ್ಮಾಣವಾದ
ಸರಕಾರಿ ಪದವಿ ಪೂರ್ವ ಕಾಲೇಜಿನ ತರಗತಿ ಕೊಠಡಿ
ಬಜಗೋಳಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ
ಮುಡಾರು ಹಿರಿಯ ಪ್ರಾಥಮಿಕ ಶಾಲಾ ತರಗತಿ ಕೊಠಡಿಯ ಉದ್ಘಾಟನೆಯನ್ನು ಶಾಸಕರಾದ ವಿ.ಸುನಿಲ್ ಕುಮಾರ್ ರವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ.ಡಿ.ಅತಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮಹಾವೀರ್ ಜೈನ್, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಿತೇಶ್ ಶೆಟ್ಟಿ, ಬಜಗೋಳಿ ಕಾಲೇಜು ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ,ಶಾಲಾ ಮುಖ್ಯೋಪಾಧ್ಯಾಯರಾದ,
ಲಿಲ್ಲಿ ಡಿಸೋಜಾ,ದೇವದಾಸ್ ಪಾಟ್ಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉದಯ.ಎಸ್.ಕೋಟ್ಯಾನ್,
ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ,ಉದ್ಯಮಿಗಳಾದ ಉಮೇಶ್ ರಾವ್, ಮಹಾವೀರ್ ಹೆಗ್ಡೆ,ನಿತ್ಯಾನಂದ ಪ್ರಭು, ಗ್ರಾಮ ಪಂಚಾಯತ್ ಸದಸ್ಯರುಗಳು, ಎಸ್.ಡಿ.ಎಂ.ಸಿ ಸದಸ್ಯರುಗಳು, ಊರಿನ ಮಹನೀಯರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು,ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







