
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮುಡಾ ಪ್ರಕರಣದ ತೀರ್ಪು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಳ್ಳಲಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಹೊರಡಿಸಿದ ಆದೇಶ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ನಡೆಸಿ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಗೊಳಿಸಲಿದೆ.































































































































