ಕಾರವಾರ: ಕೋಲಾರದಿಂದ ಪ್ರವಾಸಕ್ಕೆಂದು ಬಂದು ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಶಿಕ್ಷಕರ ನಿರ್ಲಕ್ಷವೇ ಕಾರಣ ಎಂದು ತನಿಖೆ ಕೈಗೊಂಡಿದ್ದಾರೆ. ಇದೀಗ ಮುರುಡೇಶ್ವರ ಬಿಟ್ಟಿರುವ ಪಾರ್ಥಿವ ಶರೀರಗಳು ಇಂದು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಲಿದೆ. ಬಳಿಕ ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಿ, ನಂತರ ಅವರವರ ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.