
ಮಂಗಳೂರು, ಅಕ್ಟೋಬರ್ 14: ಅಪ್ರಾಪ್ತ ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು (girls) ದಂಧೆ ಮಾಡುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮೂಡಬಿದಿರೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು. ಖಾಕಿ ಪಡೆ ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಮೂಡಬಿದಿರೆಯ ನಿಡ್ಡೋಡಿ ನಿವಾಸಿ ಆಟೋ ಚಾಲಕ, ಬಂಧಿತ ಮಹೇಶ್, ಇಬ್ಬರು ಅಪ್ರಾಪ್ತ ಕಾಲೇಜ್ ಬಾಲಕಿಯರನ್ನು ಪುಸಲಾಯಿಸಿ ಕರೆತಂದಿದ್ದ.
ಇದೇ ವೇಳೆ ತನ್ನ ಸ್ನೇಹಿತರನ್ನು ಮನೆಗೆ ಕರೆಸಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಮೂಡಬಿದಿರೆ ಪೊಲೀಸರು ಇಬ್ಬರು ಅಪ್ರಾಪ್ತೆಯರ ರಕ್ಷಣೆ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಅಕ್ರಮ ಹೈಟೆಕ್ ವೇಶ್ಯಾವಾಟಿಕೆ ದಂಧೆ
ಇನ್ನು ಇತ್ತೀಚೆಗೆ ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿ, 6 ಆರೋಪಿಗಳನ್ನು ಬಂಧಿಸಿದ್ದರು. ಇನ್ನು ದಾಳಿ ವೇಳೆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು.




















































