
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ನಡೆದ ರಾಜಕೀಯ ಚಟುವಟಿಕೆಗಳಿಗೆ ಅಂತ್ಯ ಕಂಡಿದ್ದು, ಕಾಂಗ್ರೆಸ್, ವಿಸಿಕೆ, ಸಿಪಿಐ ಹಾಗೂ ಸಿಪಿಐ(ಎಂ) ಬೆಂಬಲದೊಂದಿಗೆ ವಿಜಯ್ ನೇತೃತ್ವದ ಟಿವಿಕೆ ಮೈತ್ರಿ ಸರ್ಕಾರ ರಚಿಸಲು ಸಜ್ಜಾಗಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ವಿಜಯ್ ಅವರು ಶುಕ್ರವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದು ಮೈತ್ರಿ ಪಕ್ಷಗಳ ಬೆಂಬಲ ಪತ್ರವನ್ನೂ ಸಲ್ಲಿಸುವ ಸಾಧ್ಯತೆ ಇದೆ.
ಇದೇ ವೇಳೆ ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಟಿವಿಕೆ ಸರ್ಕಾರಕ್ಕೆ ಬೆಂಬಲ ಘೋಷಿಸುವ ನಿರೀಕ್ಷೆಯಿದೆ.
ಟಿವಿಕೆ 107 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಹಾಗೂ ವಿಸಿಕೆ ಬೆಂಬಲದಿಂದ ಸರ್ಕಾರ ರಚನೆಗೆ ಅಗತ್ಯವಾದ ಬಹುಮತ ಸಂಖ್ಯಾಬಲವನ್ನು ಪಡೆದಿದೆ.





















