
ಆಯೋಧ್ಯೆ: ಉತ್ತರ ಪ್ರದೇಶದ ಭಾಗದಲ್ಲಿ ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ಉದ್ಘಾಟನೆ ಮಾಡಲಾದ ಅಯೋಧ್ಯ ರಾಮ ಮಂದಿರದಲ್ಲಿ ಮೊದಲ ಮಳೆಗೆ ಮಾಳಿಗೆ ಸೋರುತ್ತಿದ್ದು ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ವರದಿಯಾಗಿದೆ.
ಈ ಕುರಿತು ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಸುದ್ದಿಗಾರರೊಂದಿಗೆ ಮಾತನಾಡಿ ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ. ಜುಲೈ 2025ರೊಳಗೆ ರಾಮಮಂದಿರದ ಸಂಪೂರ್ಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಅದು ಅಸಾಧ್ಯ ಎಂಬುವುದು ನನ್ನ ಅನಿಸಿಕೆಯಾಗಿದೆ. ಈಗಾಗಲೇ ಬಂದ ಮೊದಲ ಮಳೆಗೆ ರಾಮಲಲ್ಲಾನ ಜಾಗಕ್ಕೆ ನೀರು ಬಂದಿದೆ. ಹೇಗೆ ಸೋರಿಕೆ ಆಯ್ತು? ಮಳೆನೀರು ಒಳಗೆ ಬರಲು ಕಾರಣ ಏನು ಎಂಬ ಪ್ರಶ್ನೆಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಹಾಗೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.