ಖರ್ಗೆ ಮಾತು, ಅವಮಾನಕರ ಮತ್ತು ಅಸಹ್ಯಕರ ಅಮಿತ್ ಶಾ ಟೀಕೆ

ನವದೆಹಲಿ: ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದು ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ ಅವರು ಈ ಮಾತು`ಅಸಹ್ಯಕರ ಮತ್ತು ಅವಮಾನಕರ’ ಎಂದು ಹೇಳಿದ್ದಾರೆ.
ಖರ್ಗೆಯವರ ಹೇಳಿಕೆ ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ತಮ್ಮ ಭಾಷಣದಲ್ಲಿ ಸಂಪೂರ್ಣವಾಗಿ ಅಸಹ್ಯಕರವಾಗಿ ಮಾತನಾಡುವ ಮೂಲಕ ತಮ್ಮ ನಾಯಕರು ಮತ್ತು ತಮ್ಮ ಪಕ್ಷವನ್ನು ಮೀರಿಸಿದ್ದಾರೆ. ಅನಗತ್ಯವಾಗಿ ತಮ್ಮ ವೈಯಕ್ತಿಕ ಆರೋಗ್ಯದ ವಿಷಯಗಳಿಗೆ ಪ್ರಧಾನಿ ಮೋದಿಯನ್ನು ಎಳೆದಿದ್ದಾರೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಮೋದಿಯವರು, ನಾನು ಖರ್ಗೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇವೆ. ಅವರು ಹಲವು ವರ್ಷಗಳ ಕಾಲ ಬದುಕಲಿ. 2047 ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಹೇಳಿದ್ದಾರೆ.













