
ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಎಂದು ಸ್ಪಷ್ಟನೆ ನೀಡಿದ್ದಾರೆ.
ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.






















































































