
ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಸತಾರಾದಲ್ಲಿ ಮಾತನಾಡಿ ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಹೇಳಿಕೆ ನೀಡಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದು ಈಗಲೂ ಪ್ರಯತ್ನ ಮಾಡುತ್ತಾನೇ ಇದ್ದಾರೆ. ಆದರೆ ಇದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಆದರೂ ಆಪರೇಷನ್ ಮಾಡ್ತಾನೆ ಇದ್ದಾರೆ. ಅಂತಹ ಪ್ರಯತ್ನ ಯಶಸ್ವಿಯಾಗಲ್ಲ. ಅವರ ಪ್ರಯತ್ನ ಸಫಲ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ ನಾವು 20 ಸೀಟ್ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.