
ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿದ್ದು, ಮೊದಲ ಎನ್ಡಿಎ ಸಂಸದರ ಸಭೆಯಲ್ಲಿ ಪ್ರಧಾನಿ ಮೋದಿ ಸಂಸದರಿಗೆ ದೇಶವನ್ನು ಮೊದಲ ಜವಾಬ್ದಾರಿಯನ್ನಾಗಿ ನೋಡಿ, ಯಾವುದೇ ವಿಚಾರದ ಬಗ್ಗೆ ಪ್ರತಿಕ್ರಿಯಿಸುವಾಗ, ಬೇರೆಯವರನ್ನು ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಕಿವಿಮಾತು ನೀಡಿದ್ದಾರೆ.
ಮೊದಲ ಔಪಚಾರಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಕಲಿಯಲು ಸಂಸತ್ತಿಗಿಂತ ಉತ್ತಮ ಸ್ಥಳವಿಲ್ಲ, ಮಹಾನ್ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಅವರು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಬೇಕು ಎಂದು ಮೋದಿ ಸಲಹೆ ನೀಡಿದರು.
ಎನ್ಡಿಎ ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು, ಸಂಸದರು ಕ್ಷೇತ್ರಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಬೇಕು. ಸಂಸದೀಯ ನಿಯಮಗಳು ಹಾಗೂ ನಡವಳಿಕೆಯನ್ನು ಅನುಸರಿಸುವಂತೆ, ಸಂಸದರು ನಿಯಮಿತವಾಗಿ ಸಂಸತ್ತಿಗೆ ಹಾಜರಾಗಬೇಕು. ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಬೇಕು ಎಂದುಸಲಹೆ ನೀಡಿದರು.