
ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪ್ರೌಢ ಶಾಲಾ ವಿಭಾಗದ ಎಸ್. ಎಸ್ ಎಲ್. ಸಿ ವಿದ್ಯಾರ್ಥಿಗಳಿಗೆ ದಿನಾಂಕ 11/02/2026 ನೇ ಬುಧವಾರ ಬೆಳಿಗ್ಗೆ 10.00 ಗಂಟೆಗೆ ಪರೀಕ್ಷಾ ಪೂರ್ವ ಸಿದ್ಧತೆ ಪ್ರೇರಣಾ ಶಿಬಿರ ನಡೆಯಲಿದೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉಪಸ್ಥಿತಿಯಲ್ಲಿ ಶ್ರೀ ದೇವದಾಸ್ ಆಂಗ್ಲ ಭಾಷಾ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಬೆಳ್ತಂಗಡಿ ಸಂಪನ್ಮೂಲ ವ್ಯಕ್ತಿಯಾಗಿ ಶಿಬಿರವನ್ನು ನಡೆಸಿ ಕೊಡಲಿದ್ದಾರೆ ಎಂದು ಮಂಡಲದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ




















