ತಪ್ಪಿತಸ್ತರ ಶೀಘ್ರ ಬಂದನಕ್ಕೆ ಆಗ್ರಹ

ಯುವತಿ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಂತಿ ,ಸೌಹಾರ್ದತೆ, ಸಹಬಾಳ್ವೆ ಮತ್ತು ಸಹೋದರತೆಗೆ ಹೆಸರಾಗಿರುವ ನಮ್ಮ ಊರಿನಲ್ಲಿ ಇಂತಹ ಘಟನೆ ನಡೆದಿದೆ ಎಂದರೆ ನಂಬಲು ಅಸಾಧ್ಯ, ಈ ಘಟನೆಯಿಂದ ಜನರಲ್ಲಿ ಆತಂಕದ ವಾತಾವರಣದ ನಿರ್ಮಾಣವಾಗಿದೆ, ತಪ್ಪಿತಸ್ತರಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಇಂತಹ ಪ್ರಕರಣ ಮರುಕಳಿಸದಂತೆ ತಡೆಯಬಹುದು, ಇತೀಚಿನ ದಿನಗಳಲ್ಲಿ ಯವಕರು ಮಾದಕ ವಸ್ತುಗಳಿಗೆ ಬಲಿಯಾಗಿ ಇಂತಹ ಪೈಶಾಚಿಕ ಕೃತ್ಯಗಳಲ್ಲಿ ತೊಡಗುವುದು ಕಂಡು ಬರುತಿದೆ, ಪೋಲೀಸ್ ಇಲಾಖೆ ಅಂತರವನ್ನು ಮಟ್ಟ ಹಾಕುವಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು,ಸಂತೃಸ್ತೆಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅವರ ಕುಟುಂಬದ ಜೊತೆ ಕಾಂಗ್ರೇಸ್ ಪಕ್ಷ ನಿಲ್ಲಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













