ಬಡವರ ಪಡಿತರ ಚೀಟಿ ರದ್ದು ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ
ರಾಜ್ಯದಲ್ಲಿ ರೇಷನ್ ಕಾರ್ಡ್ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಸಿಎಂ ಆದೇಶವೊಂದನ್ನು ಹೊರಡಿಸಿದ್ದಾರೆ.
ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಸಿಎಂ ಆದೇಶ ನೀಡಿದ್ದಾರೆ. ಇನ್ನು ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ರದ್ದು ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.