28.8 C
Udupi
Wednesday, June 24, 2026
spot_img
spot_img
HomeBlogರಾಜೇಶ್ವರಿ ನ್ಯಾಷನಲ್ ಸ್ಕೂಲ್ ನಲ್ಲಿ, ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ರಾಜೇಶ್ವರಿ ನ್ಯಾಷನಲ್ ಸ್ಕೂಲ್ ನಲ್ಲಿ, ಕ್ಲಬ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಸಾಣೂರು, ಜೂನ್ 23, 2026: ರಾಜೇಶ್ವರಿ ನ್ಯಾಷನಲ್ ಸ್ಕೂಲ್, ಸಾಣೂರಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿವಿಧ ಕ್ಲಬ್‌ಗಳ ಉದ್ಘಾಟನಾ ಸಮಾರಂಭವು ಜೂನ್ 23ರಂದು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.


ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವಿದ್ಯಾರ್ಥಿನಿಯಾದ ಕುಮಾರಿ ಆರುಷಿ ಪ್ರಭು ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಯಾದ ಕುಮಾರಿ ದೇಶ್ನ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರದ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿವಿಧ ಕ್ಲಬ್‌ಗಳ ಚಟುವಟಿಕೆಗಳಿಗೆ ಚಾಲನೆ ನೀಡಿದರು. “ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಬೆಳೆಸಲು ಹಾಗೂ ಅವರ ವ್ಯಕ್ತಿತ್ವವನ್ನು ರೂಪಿಸಲು ಕ್ಲಬ್‌ಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬೇಕು; ಆ ಕನಸು ಸಾಕಾರಗೊಳ್ಳುವವರೆಗೆ ನಿರಂತರ ಪ್ರಯತ್ನ ನಡೆಸಬೇಕು. ಕನಸನ್ನು ಹುಡುಕಿಕೊಂಡು ಹೋಗಿ ಅದನ್ನು ನನಸಾಗಿಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳ ಮನಸ್ಸು ಸುಂದರವಾದ ದೇಗುಲದಂತಿದ್ದು, ಇತರರ ಯಶಸ್ಸಿಗೆ ಕಾರಣರಾಗುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಅಲ್ಲದೆ, ವಿದ್ಯಾರ್ಥಿಗಳು ಕ್ಲಬ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು” ಎಂದು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. “ವಿದ್ಯಾರ್ಥಿಗಳಿಗೆ ನಾಲ್ಕು ಗೋಡೆಗಳ ಶಿಕ್ಷಣ ಮಾತ್ರವಲ್ಲದೆ ಅದನ್ನು ಮೀರಿದ ಅನುಭವಾಧಾರಿತ ಶಿಕ್ಷಣವೂ ದೊರೆಯಬೇಕು. ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಆದರ್ಶ ಪ್ರಜೆಗಳಾಗಬೇಕು” ಎಂದು ಕರೆ ನೀಡಿದರು.


ಈ ಶೈಕ್ಷಣಿಕ ವರ್ಷದಲ್ಲಿ ಯೋಗ ಕ್ಲಬ್, ಪರಿಸರ ಕ್ಲಬ್, ಭಾಷಾ ಮತ್ತು ಸಾಹಿತ್ಯ ಕ್ಲಬ್, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಲಬ್, ಸಾಂಸ್ಕೃತಿಕ ಕ್ಲಬ್, ಕ್ರೀಡಾ ಕ್ಲಬ್ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಕ್ಲಬ್‌ಗಳನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆ, ನಾಯಕತ್ವ ಗುಣ, ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ಕ್ಲಬ್‌ಗಳು ಕಾರ್ಯನಿರ್ವಹಿಸಲಿವೆ.
ಕಾರ್ಯಕ್ರಮದ ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ರಶ್ಮಿ ರಾಜ್, ಮುಖ್ಯೋಪಾಧ್ಯಾಯರಾದ ಪ್ರಣವ್ ಭಟ್, ಕಾರ್ಯನಿರ್ವಹಣಾ ಅಧಿಕಾರಿ ದೀಪು ಶೆಟ್ಟಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಜೀವನ್ ಪಿಂಟೋ ಉಪಸ್ಥಿತರಿದ್ದರು.


ಸಭೆಯಲ್ಲಿ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಲಬ್ ಗಳ ಸಂಯೋಜನಾಧಿಕಾರಿಯಾದ ಶ್ರೀಮತಿ ಧನ್ಯರವರು ಉಪಸ್ಥಿತರಿದ್ದರು.
ಕೊನೆಯಲ್ಲಿ ಕುಮಾರಿ ಡೆಲಿಷ ರೀಷಲ್ ಕ್ಯಾಸ್ಟಲಿನೊ ಅವರು ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಕಲಿತು, ಮುನ್ನಡೆಸಿ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಂಕಲ್ಪಗೈದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಯಶಸ್ವಿಯಾಗಿ ಸಮಾಪ್ತಿಗೊಂಡಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page