
ರಾಜ್ಯದಲ್ಲಿ ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು ಮಾರ್ಚ್ 20ರವರೆಗೆ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 1,171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ಬೋರ್ಡ್ ಪರೀಕ್ಷೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿವೆ.









