
ಬೆಂಗಳೂರು: ಸರ್ಕಾರವು ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಮುಂದಾಗಿದ್ದು ಈ ಮೂಲಕ ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ.
ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ರಾಜ್ಯದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರಕಾರ ಘೋಷಿಸಿದ್ದು ಅದರಂತೆ ಇದೀಗ ಜಾರಿಯಾಗುತ್ತಿದೆ.
ಈವರೆಗೂ ಅಬಕಾರಿ ತೆರಿಗೆಯನ್ನು ಹೆಚ್ಚಿಸುತ್ತಲೇ ಬಂದಿದ್ದ ಸರ್ಕಾರ ಇದೇ ಮೊದಲ ಬಾರಿಗೆ ಎಇಡಿ ಕಡಿಮೆ ಮಾಡುವ ನಿರ್ಧಾರವನ್ನು ಕೈಗೊಂಡಿದೆ. ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದ್ದಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶವನ್ನೂ ಸಹ ನೀಡಿದೆ.