
ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಮತ್ತು ಹಿಂದೂ ಹೆಣ್ಣುಮಕ್ಕಳ ಹತ್ಯೆ ಪ್ರಕರಣ ತಡೆದು ರಕ್ಷಣೆ ಒದಗಿಸುವ ಉದ್ದೇಶದಿಂದ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಶ್ರೀರಾಮ ಸೇನೆಯು ಸಹಾಯವಾಣಿ ಸಂಖ್ಯೆ 9090443444 ಯನ್ನು ಬಿಡುಗಡೆ ಮಾಡಿದೆ.
ಬುಧವಾರ ಶ್ರೀರಾಮ ಸೇನೆ ಬೆಂಗಳೂರು ನಗರಾಧ್ಯಕ್ಷ ಎಸ್. ಭಾಸ್ಕರನ್, ಪತ್ರಿಕಾಗೋಷ್ಠಿಯಲ್ಲಿ ಸಹಾಯವಾಣಿ ಬಿಡುಗಡೆಗೊಳಿಸಿ ಮಾತನಾಡಿ ಅನ್ಯ ಕೋಮಿನ ಯುವಕರಿಂದ ಹಿಂದೂ ಯುವತಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ತಮ್ಮ ವೈಯಕ್ತಿಕ ಲಾಭಕ್ಕಾಗಿ ಅಮಾಯಕ ಯುವತಿಯರನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಅತ್ಯಾಚಾರ, ಕೊಲೆ, ಮತಾಂತರ ಹಾಗೂ ಭಯೋತ್ಪಾದನಾ ಕೃತ್ಯಗಳಿಗೆ ಬಳಸಲಾಗುತ್ತಿದೆ. ಇಂತಹ ಪ್ರಕರಣಗಳಿಂದ ಯುವತಿಯರನ್ನು ರಕ್ಷಿಸಲು ಸಹಾಯವಾಣಿ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.