23.6 C
Udupi
Tuesday, February 10, 2026
spot_img
spot_img
HomeBlogರಾಜ್ಯದಲ್ಲಿ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ

ರಾಜ್ಯದಲ್ಲಿ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ಗಳು, ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯ (ಯುವಿಸಿಇ)ಗಳಲ್ಲಿ ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿ 825 ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಪಾಲಿಟೆಕ್ನಿಕ್‌ಗಳಲ್ಲಿ 941 ಉಪನ್ಯಾಸಕರ ಹುದ್ದೆಗಳು, ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ 186 ಸಹಾಯಕ ಪ್ರಾಧ್ಯಾಪಕ ಹುದ್ದೆಗಳು ಹಾಗೂ ಯುವಿಸಿಇಯಲ್ಲಿ 47 ಬೋಧಕ ಹುದ್ದೆಗಳು ಭರ್ತಿಯಾಗಲಿವೆ. ಈ ನೇಮಕಾತಿಯನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮೂಲಕ ನಡೆಸಲು ಸರ್ಕಾರ ಸೂಚಿಸಿದೆ.

ಯುವಿಸಿಇಯ ಹುದ್ದೆಗಳ ಭರ್ತಿಗೆ ಮುನ್ನ ಅಲ್ಲಿನ ಖಾಲಿ ಇರುವ 72 ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯಬೇಕೆಂದು ಷರತ್ತು ವಿಧಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page