
ಮಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ 71% ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.
ಸಮನ್ವಯತೆ, ಮ್ಯಾಪಿಂಗ್ ಸಮಸ್ಯೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಮೀಕ್ಷೆ ವಿಳಂಬವಾಗಿದ್ದು ಸುಳ್ಯದಲ್ಲಿ 100%ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು ಮಂಗಳೂರಿನಲ್ಲಿ 48%ರಷ್ಟು ಸಮೀಕ್ಷೆಯಷ್ಟೇ ನಡೆದಿದೆ. ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದ್ದು ಮುಂದಿನ ನಿರ್ಧಾರವನ್ನು ಆಯೋಗದ ಸೂಚನೆಯ ಮೇರೆಗೆ ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಬುಧವಾರ ಶಾಲೆ ಆರಂಭಗೊಳ್ಳಲಿದ್ದು ಒಂದು ವೇಳೆ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ಶಿಕ್ಷಕರು ಶಾಲಾ ಆರಂಭಕ್ಕೆ ಮುನ್ನ ಅಥವಾ ಶಾಲೆ ಬಿಟ್ಟ ಬಳಿಕ, ಶನಿವಾರ-ಭಾನುವಾರ ರಜಾದಿನಗಳಲ್ಲಿ ಸಮೀಕ್ಷೆ ನಡೆಸಬೇಕೆ ಎಂಬ ವಿಚಾರಗಳ ಬಗ್ಗೆ ಆಯೋಗದ ಸೂಚನೆಯ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.



















