
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಕಂಡಿದ್ದು, ಬಿಜೆಪಿ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ಕೇಂದ್ರ ಸರಕಾರ ತೈಲದರ ಏರಿಸಿದಾಗ ಮಾಧ್ಯಮದವರು ಸೇರಿ ಯಾರು ಕೂಡ ಪ್ರತಿಭಟನೆ ನಡೆಸಲಿಲ್ಲ. ಈಗ ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ .ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಲಾಗಿದೆ. ಕೇಂದ್ರ ಸರಕಾರ ಮಾಡಿದ ಬೆಲೆ ಏರಿಕೆಯ ಬಗ್ಗೆ ಯಾರು ಮಾತನಾಡುವುದಿಲ್ಲ. ಮನಮೋಹನ್ ಸಿಂಗ್ ಅವಧಿ ತಲಾ ಬ್ಯಾರಲ್ ಕಚ್ಚಾ ತೈಲಕ್ಕೆ 113 ಡಾಲರ್ ಇದ್ದು ,ಬಿಜೆಪಿ ಅವಧಿಯಲ್ಲಿ 59 ಡಾಲರ್ ಆಯ್ತು ಆಗ ಯಾರು ಯಾಕೆ ಪ್ರಶ್ನೆ ಮಾಡಲಿಲ್ಲ? ಗ್ಯಾರಂಟಿ ಯೋಜನೆಗಳಿಗಾಗಿ 60,000 ಕೋಟಿ ಹೊಂದಿಸಬೇಕು. ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲಿ ಎಂದು ಹೇಳಲಿ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ತೈಲಬೆಲೆ ಕಡಿಮೆ ಇದೆ ಎಂದು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾತನಾಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.