29.1 C
Udupi
Saturday, March 28, 2026
spot_img
spot_img
HomeBlogರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳ ಪ್ರಾದೇಶಿಕ ಕೇಂದ್ರವನ್ನು ವೆನ್ಲಾಕ್‌ನಲ್ಲಿ ಸ್ಥಾಪನೆಗೆ ಮಹತ್ತರ ಯೋಜನೆ ರೂಪಿಸಲಾಗುವುದು: ಯು.ಟಿ. ಖಾದರ್‌

ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳ ಪ್ರಾದೇಶಿಕ ಕೇಂದ್ರವನ್ನು ವೆನ್ಲಾಕ್‌ನಲ್ಲಿ ಸ್ಥಾಪನೆಗೆ ಮಹತ್ತರ ಯೋಜನೆ ರೂಪಿಸಲಾಗುವುದು: ಯು.ಟಿ. ಖಾದರ್‌

ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಫಾದರ್‌ ಮುಲ್ಲರ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ವೆನ್ಲಾಕ್‌, ಲೇಡಿಗೋಷನ್‌ ಮತ್ತು ಕೆ.ಎಂ.ಸಿ ಆಸ್ಪತ್ರೆಗಳ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಹಾಗೂ ವೆನ್ಲಾಕ್‌, ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದು ಈ ವೇಳೆ ಇನ್ನಷ್ಟು ಗುಣಮಟ್ಟದ ಆರೋಗ್ಯ ಸೇವೆಗಳ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಾದ ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ, ಜಯದೇವ ಹೃದಯ ಆಸ್ಪತ್ರೆ, ನಿಮಾನ್ಸ್‌ ಮಾನಸಿಕ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರವನ್ನು ವೆನ್ಲಾಕ್‌ನಲ್ಲಿ ಸ್ಥಾಪನೆಗೆ ಮಹತ್ತರ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ರಾಜ್ಯದ ಪ್ರಮುಖ ಆಸ್ಪತ್ರೆಗಳ ಉಪಕೇಂದ್ರ ಆರಂಭಗೊಂಡರೆ ವೆನ್ಲಾಕ್‌, ಲೇಡಿಗೋಷನ್‌ ಆಸ್ಪತ್ರೆಗಳ ಒತ್ತಡ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ವಾಮಂಜೂರು ಸುತ್ತಮುತ್ತ ಲಭ್ಯ ನಿವೇಶನದಲ್ಲಿ ಕೇಂದ್ರ ಸ್ಥಾಪನೆಗೆ ಚಿಂತನೆ ನಡೆಸಲಾಗಿದ್ದು ಇಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದರಿಂದಲೇ ರಾಜ್ಯದ ಮೂಲೆ ಮೂಲೆಯಿಂದಲೂ ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಇಲ್ಲಿನ ಗುಣಮಟ್ಟದ ಸೇವೆಯೇ ನಮಗೆ ಹೆಮ್ಮೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸಮಾರಂಭ ಉದ್ಘಾಟಿಸಿ ಮಾತನಾಡಿ ವೆನ್ಲಾಕ್‌, ಲೇಡಿಗೋಷನ್‌ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆ ಎಂದರೆ ಇಡೀ ದೇಶ ಸಂಭ್ರಮಿಸುವಂತದ್ದು. ಈ ಹಿನ್ನೆಲೆಯಲ್ಲಿ ವೆನ್ಲಾಕ್‌ನ್ನು ರಾಜ್ಯದ ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆ ಸಿದ್ಧಗೊಂಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತಲೂ ಹೆಚ್ಚಿನ ಗುಣಮಟ್ಟದ ಆರೋಗ್ಯ ಸೇವೆ ವೆನ್ಲಾಕ್‌ ನೀಡಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಭಾಗೀರಥಿ ಸುಳ್ಯ, ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಐವನ್‌ ಡಿಸೋಜಾ, ವೀರಪ್ಪ ಮೊಯಿಲಿ, ಕೇಂದ್ರ ಮಾಜಿ ಸಚಿವರಾದ ಜನಾರ್ದನ ಪೂಜಾರಿ, ಮಾಜಿ ಸಚಿವರಾದ ಕೃಷ್ಣ ಪಾಲೇಮಾರ್‌, ಅಭಯಚಂದ್ರ ಜೈನ್‌, ಜಿಲ್ಲಾಧಿಕಾರಿ ದರ್ಶನ್‌, ಮಣಿಪಾಲ ವಿವಿ ಪ್ರೊ. ಚಾನ್ಸಲರ್‌ ಡಾ. ಎಚ್‌. ಎಸ್‌. ಬಲ್ಲಾಳ್‌, ಡಿಎಚ್‌ಒ ಡಾ. ತಿಮ್ಮಯ್ಯ ಮತ್ತಿತರರು ಪಾಲ್ಗೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page