27.4 C
Udupi
Friday, April 24, 2026
spot_img
spot_img
HomeBlogರಾಜ್ಯಪಾಲರು ಕೇಳುವ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡುವ ಅನಿವಾರ್ಯತೆ ಇಲ್ಲ: ಜಿ ಪರಮೇಶ್ವರ್

ರಾಜ್ಯಪಾಲರು ಕೇಳುವ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡುವ ಅನಿವಾರ್ಯತೆ ಇಲ್ಲ: ಜಿ ಪರಮೇಶ್ವರ್

ಬೆಂಗಳೂರು: ಸೋಮವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮ ಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ಆದರೆ, ರಾಜ್ಯಪಾಲರು ಕೇಳುವ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರ‌ ಕೊಡಬೇಕು ಖಂಡಿತವಾಗಿಯೂ ಕೊಡುತ್ತೇವೆ. ಯಾವುದಕ್ಕೆ ಉತ್ತರಿಸುವ ಅನಿವಾರ್ಯತೆ ಇರುವುದಿಲ್ಲ, ಉತ್ತರ ಕೊಡುವುದಿಲ್ಲ. ಎಲ್ಲದಕ್ಕು ಉತ್ತರಿಸಬೇಕು ಅಂತೇನು ಇಲ್ಲ ಎಂದು ಹೇಳಿದರು.ರಾಜ್ಯಪಾಲರು ಯಾವ ಉದ್ದೇಶಕ್ಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರು ಏಕಾಏಕಿಯಾಗಿ ಚುನಾಯಿತ ಜನಪ್ರತಿನಿಧಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿರುವುದನ್ನು ತಪ್ಪು ಅಂತ ಹೇಳಿ ಪ್ರತಿಭಟನೆ ನಡೆಸಿದ್ದೇವೆ.

ಸುಮ್ಮನೇ ಪ್ರತಿಭಟನೆ‌ ನಡೆಸಿಲ್ಲ. ತನಿಖೆ‌ಯಾಗಿಲ್ಲ, ಯಾವುದೇ ವರದಿಯು ಇಲ್ಲ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಪರಿಶೀಲನೆ ನಡೆಸದೆಯೇ ಶೋಕಾಸ್ ನೋಟಿಸ್ ನೀಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ. ಆದರೆ, ಪ್ರಥಮ ಬಾರಿಗೆ ರಾಜ್ಯಪಾಲರು, ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ‌. ಕಳೆದ 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಇಲ್ಲಿಯವರೆಗೆ ಅನೇಕ ರಾಜ್ಯಪಾಲರನ್ನು ಮತ್ತು ಮುಖ್ಯಮಂತ್ರಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಸಂದರ್ಭ ಯಾವತ್ತು ಬಂದಿಲ್ಲ. ರಾಜ್ಯಪಾಲರು ಸರ್ಕಾರದ ಪ್ರತಿನಿತ್ಯದ ಕೆಲಸಗಳು ಮತ್ತು ತೀರ್ಮಾನಗಳ ಬಗ್ಗೆ ಮಾಹಿತಿ ಕೊಡಿ ಅಂತ ಕೇಳಿದ್ದ ಉದಾಹರಣೆಗಳೇ ಇಲ್ಲ.ಯಾವಾಗಲಾದರೂ ಒಮ್ಮೆ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಕಾನೂನು ಸುವ್ಯವಸ್ಥೆಯ ವಿಚಾರ ಇದ್ದರೆ ಗೃಹ ಸಚಿವರು ಹೋಗಿ ರಾಜ್ಯಪಾಲರಿಗೆ ವಿವರಿಸುತ್ತಾರೆ. ಸಂಬಂಧಪಟ್ಟ ಸಚಿವರನ್ನು ಕರೆಸಿ ಕೇಳುವುದಕ್ಕೆ ರಾಜ್ಯಪಾಲರಿಗೆ ಹಕ್ಕು ಇದೆ. ಆದರೆ, ದಿನನಿತ್ಯ ಪತ್ರ ಬರೆದು, ಪತ್ರದ ಮುಖಾಂತರ ಮಾಹಿತಿ ಕೊಡಿ ಅಂತ ಕೇಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಒಳ್ಳೆಯ ಸಂಬಂಧವಿರಬೇಕು. ಆಂದಾಗ ರಾಜ್ಯದ ಮತ್ತು ಜನಗಳ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಏನು ತೀರ್ಮಾನ ತಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page