ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ವಿದ್ಯಾರ್ಥಿನಿಯರ ಸಾಧನೆ

ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಹುಬ್ಬಳ್ಳಿ, ವೇಮನ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ಹಾಗೂ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 9 ರಂದು ನಡೆದ ರಾಜ್ಯಮಟ್ಟದ 17 ವಯೋಮಿತಿಯ ಬಾಲಕಿಯರ ವೈಟ್ ಲಿಫ್ಟಿಂಗ್ 2025-26ರಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿಯ 10ನೇ ತರಗತಿ ವಿದ್ಯಾರ್ಥಿಗಳಾದ ರಿಷಾ ಜಿ. ಕೋಟ್ಯಾನ್ 58 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ, ಯಶ ಜಿ. ಕೋಟ್ಯಾನ್ 53 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಹಾಗೂ 9ನೇ ತರಗತಿಯ ವಿದ್ಯಾರ್ಥಿನಿ ವಿಸ್ಮಯ 69 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.






















































