
ಬೆಂಗಳೂರು: ಮುಂಗಾರು ಮಳೆ ಆರ್ಭಟ ಹೆಚ್ಚಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಆರ್ಭಟವು ಹೆಚ್ಚಾಗಿದ್ದು ಪರಿಣಾಮ ಡೆಂಗ್ಯೂವಿನಿಂದ ಸಾವನ್ನಪ್ಪಿದವರ ಸಂಖ್ಯೆಯು ಹೆಚ್ಚಾಗುತ್ತಿದೆ.
ಹೀಗಾಗಿ ಆರೋಗ್ಯ ಸಚಿವರು ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚಿಸಿದ್ದು ಜೊತೆಗೆ ಡೆತ್ ಆಡಿಟ್ ಮಾಡಲು ಮುಂದಾಗಿದ್ದಾರೆ.
5,374ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದೂವರೆ ಸಾವಿರ ಸನಿಹಕ್ಕೆ ತಲುಪಿದೆ. ಇದುವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ ಏಳು ಜನ ಬಲಿಯಾಗಿದ್ದು ಹೀಗಾಗಿ ಸಾವಿನ ಬಗ್ಗೆ ಡೆತ್ ಆಡಿಟ್ ಮಾಡೋದಕ್ಕೆ ಆರೋಗ್ಯ ಇಲಾಖೆ ನಿರ್ಧಾರ ಕೈಗೊಂಡಿದೆ.
ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಬೇಕು. ಡೆತ್ ಮಾಹಿತಿಯನ್ನು ಹಂಚಿಕೊಳ್ಳಲು ಸಚಿವರು ಸೂಚಿಸಿದ್ದು, ಖಾಸಗಿ ಆಸ್ಪತ್ರೆಯವರು ಡೆಂಗ್ಯೂ ಮಾಹಿತಿಯನ್ನು ಮುಚ್ಚಿಡುವಂತಿಲ್ಲ.