
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದ್ದಾರೆ.
ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು.ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು,ಇದರಿಂದ ರೊಚ್ಚಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೋರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ.
ದರ್ಶನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ
ನಟ ದರ್ಶನ್ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು.
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ನಟಿ ಪವಿತ್ರಾ ಗೌಡ ಪೋಲಿಸರ ವಶಕ್ಕೆ
ಈ ಹಿನ್ನಲೆ ರಾಜರಾಜೇಶ್ವರಿ ಠಾಣಾ ಪೋಲಿಸರು ನಟಿ ಪವಿತ್ರಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.