
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ 12 ಮಂದಿಯನ್ನು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪ್ರಕರಣ ಸಂಬಂಧ ಇಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿ ನ್ಯಾಯಾಲಯ ಆದೇಶ ಹೊರಡಿಸಿದೆ.ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವುದಕ್ಕೆ ದರ್ಶನ್ ಪರ ವಕೀಲ ಅನಿಲ್ ಬಾಬು ಆಕ್ಷೇಪ ವ್ಯಕ್ತಪಡಿಸಿದರು. ಎ13, ಎ5ಗೆ ಪೊಲೀಸರು ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂದು ಎಂದು ನ್ಯಾಯಾಲಯದ ಗಮನಕ್ಕೆ ತಂದರು.ಪವಿತ್ರಾ ಅವರು 6 ದಿನಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಆರೋಪಿಗಳ ಪೈಕಿ ಮಹಿಳೆ ನೋವು ಅನುಭವಿಸಿದ್ದಾರೆ. ಆರೋಪಿಗಳ ಹೇಳಿಕೆ ಹೊರಗೆ ಸೋರಿಕೆಯಾಗುತ್ತಿದೆ. ರಿಮ್ಯಾಂಡ್ ಅರ್ಜಿ ನೀಡುತ್ತಿಲ್ಲ. ಇದುವರೆಗೂ ನಮಗೆ ರಿಮ್ಯಾಂಡ್ ಅರ್ಜಿ ಬಂದಿಲ್ಲ. ನಮ್ಮ ಭೇಟಿಗೆ ಬಿಡುತ್ತಿಲ್ಲ. ಐದು ದಿನ ವಿಚಾರಣೆ ಮಾಡಿದರೂ ರಿಮ್ಯಾಂಡ್ ಅಪ್ಲಿಕೇಷನ್ ನೀಡಿಲ್ಲ ಎಂದು ಪವಿತ್ರಾ ಗೌಡ ಪರ ವಕೀಲರು ತಿಳಿಸಿದರು.