
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟರ್ಡಿ ಅಂತ್ಯವಾದ ಹಿನ್ನೆಲೆ ನಟ ದರ್ಶನ್ ,ಪವಿತ್ರಗೌಡ ಮತ್ತು ಇತರ ಆರೋಪಿಗಳನ್ನು ಪೊಲೀಸರು ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದು, ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಇನ್ನು ಪವಿತ್ರ ಗೌಡ ಮತ್ತು ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪವಿತ್ರ ಗೌಡ ಮತ್ತು ಇತರ ಆರೋಪಿಗಳು ಇಂದೇ ಪರಪ್ಪನ ಅಗ್ರಹಾರ ಸೇರಲಿದ್ದು, ಹೆಚ್ಚಿನ ವಿಚಾರಣೆಗಾಗಿ ನಟ ದರ್ಶನ್ ರವರನ್ನು ಮತ್ತೆ ಶನಿವಾರದವರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.