
ಬೆಂಗಳೂರು : ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆಗಳ ಅರಣ್ಯ ತಿರುವಳಿ ಮತ್ತು ಭೂಸ್ವಾಧೀನ ಪ್ರಸ್ತಾವನೆ ಕುರಿತು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ದರ್ಶನ್ ಕೇಸ್ ಆಗಿ 24 ಗಂಟೆ ಆದ್ಮೇಲೆನೇ ನನಗೆ ಅವರ ಪ್ರಕರಣ ಗೊತ್ತಾಗಿದ್ದು, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ’ ಎಂದು ತಿಳಿಸುವ ಮೂಲಕ ದರ್ಶನ್ ಕೇಸ್ ಮುಚ್ಚಿಹಾಕಲು ತಮ್ಮನ್ನು ಸಂಪರ್ಕಿಸಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದರು.