
ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ನಟ ದರ್ಶನ್ ಹಾಗೂ ಪವಿತ್ರ ಗೌಡ ಮತ್ತು ಸಂಗಡಿಗರ ಬಂಧನ ವಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದು ,ಪತ್ನಿ ವಿಜಯಲಕ್ಷ್ಮಿ ಯಾವುದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಇದೀಗ ತಮ್ಮ ಇನ್ಸ್ಟಾಗ್ರಾಮ್ ನಲ್ಲಿರುವ ಪತಿಯ ಪ್ರೊಫೈಲ್ ಫೋಟೋ ಡಿಲೀಟ್ ಮಾಡಿದ್ದು ಪತಿಯನ್ನು ಅನ್ ಫಾಲೋ ಮಾಡಿದ್ದಾರೆ.