
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಹೆಚ್‍ಡಿ ಕುಮಾರಸ್ವಾಮಿ ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ‘ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಹೇಳಿದರು.
ನಾನು ರೇವಣ್ಣ ಕುಟುಂಬ ಮುಗಿಸಲು ಪ್ಲ್ಯಾನ್ ಮಾಡ್ತಿದ್ದೇನೆಂದು ಹಲವರು ಮಾತನಾಡಿಕೊಳ್ತಿದ್ದಾರೆ. ಆದರೆ ನಾನು ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ ಪರ ಹೋರಾಟ ಮಾಡುತ್ತೇನೆ. ಪೆನ್ಡ್ರೈವ್ ಪ್ರಕರಣ ದೊಡ್ಡಮಟ್ಟದಲ್ಲಿ ನಡೆದಿದೆ. ಇನ್ನೂ ಸಮಯ ಇದೆ, ನಾನು ದುಡುಕಲ್ಲ ಎಂದು ಅವರು ಹೇಳಿದ್ದಾರೆ