ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ, ಕುಡಿಯುವ ನೀರಿನ ಘಟಕದ ದೇಣಿಗೆ

ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಕಾರ್ಕಳ ರೋಟರಿ ಕ್ಲಬ್ ವತಿಯಿಂದ ಕುಡಿಯುವ ನೀರಿನ ಘಟಕವನ್ನು ದೇಣಿಗೆಯಾಗಿ ನೀಡಲಾಯಿತು.ಇದರ ಹಸ್ತಾಂತರ ಕಾರ್ಯಕ್ರಮವು ದಿನಾಂಕ 28-02- 2025 ರಂದು ನೆರವೇರಿತು.
ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಗವರ್ನರ್- ರೊಟೇರಿಯನ್ C. A ದೇವಾನಂದ್ ಅವರು ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು
ಸಹಾಯಕ ಗವರ್ನರ್ ರೊಟೇರಿಯನ್ ಅನಿಲ್ ಡೇಸಾ, ವಲಯ ಸೇನಾನಿ – ರೊಟೇರಿಯನ್ ಸುರೇಶ್ ನಾಯಕ್,
ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರೋ.ಇಕ್ಬಾಲ್ ಅಹಮದ್,
ಕಾರ್ಯದರ್ಶಿ-ರೋ. ಗಣೇಶ್ ಸಾಲಿಯಾನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಜಾನನ ಮರಾಠೆ ಅವರು ರೋಟರಿ ಕ್ಲಬ್ ಇದರ ಚಟುವಟಿಕೆಗಳನ್ನು ಶ್ಲಾಘಿಸಿದರು ಹಾಗೂ ಗ್ರಾಮೀಣ ಶಾಲೆಗಳಿಗೆ ರೋಟರಿ ಕ್ಲಬ್ ಕಾರ್ಕಳ ಇದರ ದೇಣಿಗೆಗಳಿಗಾಗಿ ಸದಸ್ಯರನ್ನು ಅಭಿನಂದಿಸಿದರು.
ಕಾರ್ಯಕ್ರಮವನ್ನು ಶಿಕ್ಷಕಿ ಶೋಭಾ ಇವರು ನಿರೂಪಿಸಿದರು. ಮುಖ್ಯೋಪಾಧ್ಯಾಯನಿ ಪೂರ್ಣಿಮಾ ಶೆಣೈ ಸ್ವಾಗತಿಸಿದರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.






















































