
ಬೆಳಗಾವಿ: ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಬೆಳಗಾವಿಯಲ್ಲಿ ಮಾತನಾಡಿ ಸ್ಪೋಟಕ ಭವಿಷ್ಯ ನುಡಿದಿದ್ದು ಅದೇನೆಂದರೆ ಲೋಕಕ್ಕೆ ಜಲ ಹಾಗೂ ವಾಯು ಗಂಡಾಂತರವಿದೆ. ಮತ್ತೆ ಯುದ್ಧ ಭೀತಿ ಇದ್ದು ಕೆಲವು ದೇಶಗಳು ನಾಶವಾಗಲಿವೆ ಎಂದಿದ್ದಾರೆ.
ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದ್ದು ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪಗಳು, ಮತೀಯ ಗಲಭೆಗಳು ಹೆಚ್ಚಾಗಲಿವೆ.
ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದ್ದು ಕೆಲವು ದೇಶಗಳು ಅಳಿದು ಹೋಗಿ ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ ಎಂದು ಭವಿಷ್ಯ ನುಡಿದ ಶ್ರೀಗಳು ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಮುಂದಿನ ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತದೆಯೋ ನೋಡಬೇಕು ಎಂದು ಹೇಳಿದ್ದಾರೆ.






















































