
ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಫಲಿತಾಂಶ ನಾಳೆ ಪ್ರಕಟವಾಗಲಿದ್ದು,ಮತ ಎಣಿಕೆ ನಾಳೆ ಬೆಳಿಗ್ಗೆ ಉಡುಪಿ ನಗರದ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದೆ.
ಆ ಪ್ರಯುಕ್ತ ವ್ಯಾಪಕ ಬಂದೋಬಸ್ತ್ ಕೈಗೊಂಡಿರುವುದಾಗಿ ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ.
ಕೌಂಟಿಂಗ್ ಸೆಂಟರ್ ಸುತ್ತ ಭದ್ರತೆಗಾಗಿ ಸುಮಾರು 350 ಪೊಲೀಸರನ್ನು ನಿಯೋಜಿಸಲಾಗಿದ್ದು 1 ಕೆಎಸ್ ಆರ್ ಪಿ ಮತ್ತು 1 ಡಿಎಆರ್ ಜೊತೆಗೆ ಒಂದು ಅಗ್ನಿಶಾಮಕ ವಾಹನವು ಸ್ಥಳದಲ್ಲಿ ಕಾರ್ಯ ನಿರ್ವಹಿಸಲಿದೆ.
ಬಂದೋಬಸ್ತ್ ಉದ್ದೇಶದಿಂದ ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು 400 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಜಿಲ್ಲೆಯ ವಿವಿಧೆಡೆ 3 ಕೆಎಸ್ ಆರ್ ಪಿ ಮತ್ತು 3 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ .
ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿ ಸಂಪರ್ಕಿಸುವಂತೆ ಎಸ್ಪಿ ಡಾ.ಅರುಣ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ