
ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭಗೊಂಡಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ.
ಅಂಚೆ ಮತಗಳ ಮತ ಎಣಿಕೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಮೈಸೂರು, ಬಾಗಲಕೋಟೆ, ಮಂಡ್ಯ ದಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇಂದು ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ 8360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.