
ನವದೆಹಲಿ: ವಯನಾಡು ಮತ್ತು ರಾಯಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ರಾಹುಲ್ ಗಾಂಧಿ ಎರಡನೇ ಬಾರಿ ಇಲ್ಲಿಂದ ಕಣಕ್ಕೆ ಇಳಿದಿದ್ದು ಇತ್ತ ತಾಯಿ ಸೋನಿಯಾ ಗಾಂಧಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಹಿನ್ನೆಲೆ, ಇಲ್ಲಿಂದಲೂ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 103 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಕೆ.ಸುರೇಂದ್ರನ್ ವಯನಾಡಿನಲ್ಲಿ ರಾಹುಲ್ ಗಾಂಧಿಯವರಿಗೆ ತೀವ್ರ ಸ್ಪರ್ಧೆ ನೀಡಲಿದ್ದು ಅಂತಿಮವಾಗಿ ರಾಹುಲ್ ಗಾಂಧಿ ಗೆಲುವು ಸಾಧಿಸಲಿದ್ದಾರೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ. ಇತ್ತ ರಾಯಬರೇಲಿಯಲ್ಲಿ ಬಹುಜನ ಸಮಾಜ ಪಾರ್ಟಿಯ ಠಾಕೂರ್ ಪ್ರಸಾದ್ ಯಾದವ್ ಪ್ರಬಲ ಅಭ್ಯರ್ಥಿಯಾಗಿದ್ದಾರೆ.
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವಯನಾಡ್, ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ, ಗುಜರಾತ್‌ನ ಗಾಂಧಿನಗರದಲ್ಲಿ ಅಮಿತ್ ಶಾ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ರಿಸಲ್ಟ್ ಬಗ್ಗೆ ಹೆಚ್ಚಿನ ಕುತೂಹಲವಿದೆ.