28.4 C
Udupi
Tuesday, July 7, 2026
spot_img
spot_img
HomeBlogವಯನಾಡ್‌ನಲ್ಲಿ ಮಣ್ಣು ಕುಸಿತ: ಹೋಂಸ್ಟೇ, ಕಾರ್ಮಿಕರ ತಂಗುದಾಣಕ್ಕೆ ಹಾನಿ

ವಯನಾಡ್‌ನಲ್ಲಿ ಮಣ್ಣು ಕುಸಿತ: ಹೋಂಸ್ಟೇ, ಕಾರ್ಮಿಕರ ತಂಗುದಾಣಕ್ಕೆ ಹಾನಿ

ಕಲ್ಲೆಟ್ಟಾ (ಕೇರಳ): ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಆರಂಭವಾದ ಭಾರೀ ಮಳೆ ಮಂಗಳವಾರ ಭೀಕರ ಭೂಕುಸಿತಕ್ಕೆ ಕಾರಣವಾಗಿದೆ. ಮಲಪ್ಪುರಂ-ವಯನಾಡ್ ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಸಮೀಪ ಮಣ್ಣು ಕುಸಿದು, ಪ್ರವಾಸಿ ಹೋಂಸ್ಟೇಗಳು ಹಾಗೂ ಆನಕ್ಕಂಪೊಯಿಲ್-ಮೆಪ್ಪಾಡಿ ಸುರಂಗ ನಿರ್ಮಾಣ ಕಾಮಗಾರಿಯ ಕಾರ್ಮಿಕರು ತಂಗಿದ್ದ ಸ್ಥಳದ ಮೇಲೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಭೂಕುಸಿತ ಸಂಭವಿಸಿದ ವೇಳೆ ಸುರಂಗ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾರಣ ಹಲವಾರು ಕಾರ್ಮಿಕರು ಸ್ಥಳದಲ್ಲೇ ಇದ್ದರು. ಕೆಲವರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಮಿಕರ ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ಕಳೆದ 24 ಗಂಟೆಗಳಲ್ಲಿ ಈ ಪ್ರದೇಶದಲ್ಲಿ 265 ಮಿ.ಮೀ. ಮಳೆ ದಾಖಲಾಗಿದ್ದು, ಇದೇ ಭೂಕುಸಿತಕ್ಕೆ ಪ್ರಮುಖ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ (NDRF) ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಕೇರಳ ಕೃಷಿ ಸಚಿವ ಟಿ. ಸಿದ್ದಿಕ್ ಹಾಗೂ ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಮಣ್ಣಿನಡಿ ಇನ್ನೂ ಯಾರಾದರೂ ಸಿಲುಕಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page