
ಕೇಂದ್ರ ಸರ್ಕಾರವು ಬಜೆಟ್ ಮಂಡನೆಗೂ ಮೊದಲೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ಮಾಡಿ ಗುಡ್ ನ್ಯೂಸ್ ನೀಡಿದೆ.
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 7 ರೂಪಾಯಿಗಳಷ್ಟು ಇಳಿಕೆ ಮಾಡಿದ್ದು ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ.
ತೈಲ ಕಂಪನಿಗಳು ಜಾಗತಿಕ ಕಚ್ಚಾ ತೈಲ ದರಗಳಲ್ಲಿನ ಬದಲಾವಣೆಗಳು ಮತ್ತು ಇತರ ಅಂಶಗಳ ಆಧಾರದ ಮೇಲೆ ನಿಯಮಿತವಾಗಿ LPG ಬೆಲೆಗಳನ್ನು ಪರಿಷ್ಕರಿಸುತ್ತಿದ್ದು ಆದರೆ ಈ ಪರಿಷ್ಕರಣೆಯಲ್ಲಿ ಮನೆಯ ಅಡುಗೆಗೆ ಬಳಸುವ ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ.





















