
ನವದೆಹಲಿ: ಜೂನ್ 1 ರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 69.50 ರೂ. ಕಡಿತಗೊಳಿಸಿವೆ.ದೇಶಾದ್ಯಂತ ಮೆಟ್ರೋ ನಗರಗಳಿಗೂ ಇದು ಅನ್ವಯವಾಗಲಿದ್ದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ 1,676 ರಷ್ಟಿದೆ. ಮಾರ್ಚ್ 1 ರಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು 19 ರೂ. ಇಳಿಕೆ ಮಾಡಲಾಗಿದ್ದು ಏಪ್ರಿಲ್‌ನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್ (ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ 30.50 ರೂ. ಮತ್ತು 7.50 ರೂ. ರಷ್ಟು ಕಡಿತಗೊಳಿಸಲಾಗಿತ್ತು.