
ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಚಿವ ಬಿ.ಎನ್ ನಾಗೇಂದ್ರ ಅವರನ್ನು ಇದೀಗ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಇದಲ್ಲದೆ, ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಗಳ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬಳ್ಳಾರಿ ,ರಾಯಚೂರು, ಹಾವೇರಿ ಮುಂತಾದ ಕಡೆ ಅಧಿಕಾರಿಗಳು ದಾಳಿ ನಡೆಸಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸಕ್ಕೆ ಕೂಡ ದಾಳಿ ನಡೆಸಿದ ಅಧಿಕಾರಿಗಳು ಮಾಜಿ ಸಚಿವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಹುಕೋಟಿ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್ ಟಿ ನೋಟಿಸು ನೀಡಿದ ಬೆನ್ನಲ್ಲೇ, ಇದೀಗ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.