
ಬೆಂಗಳೂರು: ಬಹುಕೋಟಿ ರೂಪಾಯಿ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ನಕಲಿ ಖಾತೆ ತೆರೆದ ಆರೋಪದಲ್ಲಿ ಸತ್ಯನಾರಾಯಣ ವರ್ಮ ಎಂಬಾತನನ್ನು ಹೈದರಾಬದ್ನಲ್ಲಿ ಬಂಧಿಸಿದೆ.
ಈತ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದು 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿತ್ತು. ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿದೆ.
ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ ಮಾಡಲಾಗಿದೆ. ಇಂದು ಸತ್ಯನಾರಾಯಣನನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು.
ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್‌ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ