28.4 C
Udupi
Sunday, April 26, 2026
spot_img
spot_img
HomeBlogವಾಲ್ಮೀಕಿ ನಿಗಮ ಹಗರಣ.. ಬಂಧಿತ ಆರೋಪಿಯಿಂದ ಸಿಎಂ ಸನ್ಮಾನದ ಅರ್ಥವೇನು..? ಎಷ್ಟು ಸರಿ..?

ವಾಲ್ಮೀಕಿ ನಿಗಮ ಹಗರಣ.. ಬಂಧಿತ ಆರೋಪಿಯಿಂದ ಸಿಎಂ ಸನ್ಮಾನದ ಅರ್ಥವೇನು..? ಎಷ್ಟು ಸರಿ..?

ಶಾಸಕ ವಿ. ಸುನಿಲ್ ಕುಮಾರ್ ಪ್ರಶ್ನೆ

ಉಡುಪಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ
ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದ್ದು, ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಿಎಂ ಗೆ ಶಾಲು ಹೊದೆಸಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್,

ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ….!
-ಸಿಎಂ ಸಿದ್ದರಾಮಯ್ಯನವರೇ, ಶಾಸನಸಭೆಯಲ್ಲಿ ಇಡಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡುವಾಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ನೀವು ಒಪ್ಪಿಕೊಂಡಿದ್ದು ಸುಳ್ಳೇ ?

  • ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದಿದ್ದು ಸುಳ್ಳೇ ?
  • ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಜಾರಿ ನಿರ್ದೇಶನಾಲಯ ನಾಗೇಂದ್ರನನ್ನು ಬಂಧಿಸಿದ್ದು ಸುಳ್ಳೇ ?
    ಎಲ್ಲವೂ ರಾಜ್ಯದ ಜನತೆಯ ಎದುರು ಮುಕ್ತವಾಗಿ ನಡೆದ ಘಟನಾವಳಿಗಳು. ಅಕ್ರಮದ ಸಂಬಂಧ ಜೈಲಿಗೆ ಹೋಗಿ ಬಂದ ಆರೋಪಿಯೊಬ್ಬ ಈಗ ನೇರಾನೇರ ನಿಮ್ಮ ನಿವಾಸಕ್ಕೆ ಬಂದು ವಿಜಯೋತ್ಸವ ನಡೆಸಿ ಬಂದವರಂತೆ ಸನ್ಮಾನ ಮಾಡುತ್ತಾರೆಂದರೆ ಏನರ್ಥ ? -ಈ ಅಕ್ರಮಕ್ಕೆ ನಿಮ್ಮ ಚಿತಾವಣೆ ಇತ್ತೆ ಹಾಗಾದರೆ ? ಆಂಧ್ರದ ಚುನಾವಣೆಗೆ ನಿಮ್ಮ ಬಾಬ್ತಿನಿಂದ ನಾಗೇಂದ್ರ ಎಷ್ಟು ಹಣ ವರ್ಗಾವಣೆ ಮಾಡಿದರು ?
  • ಮಹಾರಾಷ್ಟ್ರ ಚುನಾವಣಾ ಹೊತ್ತಿನಲ್ಲಿ ಇನ್ನು ಯಾವ ನಿಗಮಕ್ಕೆ ಕೊಳ್ಳೆ ಹೊಡೆಯೋಣ ಎಂದು ಚರ್ಚಿಸಲು ಆರೋಪಿ ನಾಗೇಂದ್ರನಿಂದ ಅಭಿನಂದನೆ ಹಾಗೂ ಸಲಹೆ ಪಡೆದಿರೇ ?
    ವಾಲ್ಮೀಕಿ ಜನಾಂಗದ ಸಂವಿಧಾನ ಬದ್ಧ ಹಣವನ್ನು ನುಂಗಿ ನೀರು ಕುಡಿದ ಆರೋಪಿಯನ್ನು ವಾಲ್ಮೀಕಿ ಜಯಂತಿಯ ಹಿಂದಿನ ದಿನ ಆಲಂಘಿಸಿ ಅಕ್ಕರೆ ಸುರಿಸಿದ್ದು ಎಷ್ಟು ಸರಿ ಸಿದ್ದರಾಮಯ್ಯನವರೇ ? ಎಂದು ಪ್ರಶ್ನಿಸಿದ್ದಾರೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page