
ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ವಿಚಾರದಲ್ಲಿ, ಜೈಲು ಪಾಲಾಗಿದ್ದ ಮಾಜಿ ಸಚಿವ ಬಿ ನಾಗೇಂದ್ರರವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಶಿವಮೊಗ್ಗದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದು, ಇದರ ಬೆನ್ನಲ್ಲೇ ಹಗರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ಹೆಸರು ಕೇಳಿ ಬಂದಿದ್ದು, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ಮೇಲಿನ ಆರೋಪಗಳು ದೃಢವಾಗುತ್ತಿದ್ದಂತೆ ಇವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರರವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನು ಜಾಮಿನಿಗಾಗಿ ಎರಡು ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಆದೇಶ ಹೊರಡಿಸಲಾಗಿದೆ.













